ಎಸ್ಎಸ್ಎಫ್ ರಾಜ್ಯ ಪ್ರತಿಭೋತ್ಸವ
ಕರ್ನಾಟ ರಾಜ್ಯ ವಿದ್ಯಾರ್ಥಿ ಒಕ್ಕೂಟವು ಯುವ ಜನಾಂಗದದಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುತ್ತಾ ಬಂದಿರುವ ಪ್ರತಿಭೋತ್ಸವ ರಾಜ್ಯ ಸಮಾವೇಶವು ನವೆಂಬರ್ 26 ರಿಂದ 28 ರ ವರೆಗೆ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರತಿಭೋತ್ಸವ ಸಮಿತಿಯ ಚೇರ್ಮೆನ್ ಕೆ.ಎಂ. ಮುಸ್ತಫಾ ನಈಮಿ ಹಾವೇರಿ ತಿಳಿಸಿದರು.
ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ ಬಿ.ಎಂ. ಮುಮ್ತಾಝ್ ಆಲಿ,ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಹಾಫಿಝ್ ಸುಫಾನ್ಯ ಸಖಾಫಿ ಮತ್ತಿತರರು ಉಪಸ್ಥಿತರಿದ್ದರು.