ಎಸ್.ಸಿ.ಡಿ.ಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು

ಮಂಗಳೂರಿನ ಕೊಡಿಯಾಲ್‍ಬೈಲ್‍ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ವಿತರಿಸಿದ್ರು. ಈ ವೇಳೆ ಮಾತನಾಡಿದ ಅವರು,ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಹಮ್ಮಿಕೊಂಡಿ ರುವ ಲಾಕ್‍ಡೌನ್‍ನ್ನು ಶೀಘ್ರ ತೆರವು ಗೊಳಿಸುವ ಇಂಗಿತವನ್ನು ಸರಕಾರ ಹೊಂದಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಎಸ್ ಸಿ ಡಿ ಸಿಸಿ ಬ್ಯಾಂಕ್ ನೆರವು ಶ್ಲಾಘನೀಯ ಎಂದು ಅವರು ಹೇಳಿದ್ರು. ಇನ್ನುಒಂದು ವಾರದಲ್ಲಿ ಜಿಲ್ಲೆಗೆ ಇನ್ನಷ್ಟು ಕೋವಿಡ್ ನಿಯಂತ್ರಣ ಲಸಿಕೆ ಬರಲಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದ.ಕ ಜಿಲ್ಲೆಯ 60 ಆಸ್ಪತ್ರೆಗಳಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡದಂತೆ ಆದೇಶ ನೀಡಲಾಗಿದೆ ಸಚಿವರು ಹೇಳಿದ್ರು.


ಇನ್ನು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡುತ್ತಾ ಕೊರೋನಾ ಸಂಕಷ್ಟದ ಸಂದರ್ಭ ದಲ್ಲಿ ಬ್ಯಾಂಕ್ ತನ್ನ ಗ್ರಾಹಕರು ಅಲ್ಲದೆ ತೊಂದರೆ ಗೀಡಾದ ಜನರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ ಎಂದರು.

ಈ ವೇಳೆ ಶಾಸಕ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾ ರ್ ಸೂರಿಂಜೆ, ಲೀಡ್ ಬ್ಯಾಂಕ್ ಪ್ರತಿನಿಧಿ ಪ್ರವೀಣ್, ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಸಹಕಾರಿ ಸಂಘಗಳ ನೋಂದವಣಾಧಿಕಾರಿ ಪ್ರವೀಣ್ ನಾಯಕ್ ನಿರ್ದೇಶಕರಾದ ದೇವಿ ಪ್ರಸಾದ್ ಶೆಟ್ಟಿ ಶಶಿಕುಮಾರ್ ರೈ ಮೊದಲಾವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.