ಕಟಪಾಡಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಕಂಬಳ ದ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಆದಿತ್ಯವಾರ ನಡೆದಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಈ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು.

 

Related Posts

Leave a Reply

Your email address will not be published.