ಕಡಬದ ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆ
ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.