ಕಡಬ: ಇಲಿ ಜ್ವರಕ್ಕೆ ಯುವಕ ಬಲಿ
ಕಡಬ ತಾಲೂಕು ಐತ್ತೂರು ಗ್ರಾಮದ ಯುವಕನೊಬ್ಬ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಯುವಕ.ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಮೃತ ಮೋಹಿತ್ ತಾಯಿ ಸುಶೀಲಾ, ಸಹೋದರಿ ಗೀತಾ ಅವರನ್ನು ಅಗಲಿದ್ದಾರೆ.