ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಂಡ ಗುಂಡಿ ಮುಚ್ಚಿ ಹಾಕಿ ತಾಯಿ ಮಗಳ ಸಾಮಾಜಿಕ ಕಾಳಜಿ
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿದ್ದಾರೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಈ ಜಾಗದಲ್ಲಿ ಮಳೆಗಾಲದಲ್ಲಿ ಹೊಂಡಗಳು ನಿರ್ಮಾಣವಾಗುತ್ತದೆ ಹಾಗೂ ೩ ವರ್ಷಗಳಿಂದ ಅನೇಕ ಬಾರಿ ಅಪಘಾತಗಳಾಗಿ ಸಾವು-ನೋವು ಕೂಡ ಸಂಭವಿಸಿದೆ. ಅನಂತಾವತಿ ಅವರ ಮನೆಯು ಸಮೀಪದಲ್ಲಿದ್ದು, ವಾಹನಗಳ ಚಕ್ರಗಳು ಈ ಹೊಂಡಗಳಿಗೆ ಬಿದ್ದಾಗ ಭಾರೀ ಶಬ್ದ ಕೇಳಿಸುವುದಲ್ಲದೆ ಅಪಘಾತದ ದೃಶ್ಯಗಳು ಕಣ್ಣಮುಂದೆ ಬಂದು ನಿಲ್ಲುತ್ತವೆ.ಇಂತಹ ಘಟನೆಗಳು ಮುಂದೆ ಸಂಭವಿಸದಿರಲಿ ಎಂದು ತಮ್ಮಿಂದ ಸಾಮಾಜಿಕ ಕಾರ್ಯ ಮಾಡ್ತಾ ಇದ್ದಾರೆ.