ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ : ಶೇಖರಗೌಡ ಮಾಲಿಪಾಟೀಲ
ಕನ್ನಡದ ಗರಿಮೆ, ಹಿರಿಯೆಯ ಪ್ರತೀಕವಾದ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಲು ಸಮರ್ಥ ನಾಯಕತ್ವ ಅಗತ್ಯವಿದೆ. ಇಂಥ ಪ್ರಾತಿನಿಧಿಕ ಸಂಸ್ಥೆಗೆ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಸಂಘಟಕರು, ಜನಪರ ಸಂಘಟನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಒತ್ತಾಯದಿಂದ ಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ ಎಂದು ಶೇಖರಗೌಡ ಮಾಲಿಪಾಟೀಲ ಹೇಳಿದರು.
ಮಂಗಳವಾರ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕನ್ನಡ ಸಾಹಿತ್ಯ, ಸಂಸ್ಕೃತಿಗೆ ನಿರಂತರ ಕೊಡುಗೆ ನೀಡುತ್ತ ಬಂದ ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲೆಯವನಾದ ನಾನು, ಕಳೆದ ಮೂರು ದಶಕಗಳಿಂದ ಕನ್ನಡ ನಾಡು ನುಡಿ ಸಾಹಿತ್ಯ ಪರಿಷತ್ತು, ಶಿಕ್ಷಣ ಸಂಸ್ಥೆಗಳು, ಸಮಾಜ ಸೇವೆ, ಸಾಹಿತ್ಯ, ಕೃಷಿ ಮತ್ತು ಸಹಕಾರ ಕ್ಷೇತ್ರಗಳಲ್ಲಿ ನಿರಂತರ, ನಿಷ್ಕಾಮ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದೇನೆ. ವಿದ್ಯಾರ್ಥಿ ದೆಸೆಯಲ್ಲಿ ಸಾಹಿತ್ಯ ಸಂಸ್ಕೃತಿಯ ಗೀಳು ಹಚ್ಚಿಕೊಂಡು ನಾನು ಜನಪರ ಕಾಳಜಿ ಹೊಂದಿ ಸಂಘಟನೆ ತೊಡಗಿಸಿಕೊಂಡು ಮುಂದೆ ಹಲವು ಸಂಘ ಸಂಸ್ಥೆಗಳನ್ನು ಸ್ಥಾಪಿಸಿ ಸೇವೆ ಸಲ್ಲಿಸುತ್ತಿದ್ದೇನೆ ಎಂದರು.
ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷನಾಗಿ ಎರಡು ಅವಧಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಂಘ, ಸಂಸ್ಥೆಗಳ ಪ್ರತಿನಿಧಿಯಾಗಿ ಒಂದು ಬಾರಿ ಸೇವೆ ಸಲ್ಲಿಸಿದ್ದೇನೆ. ಕನ್ನಡ ಪ್ರಚಾರಕನಾಗಿ ಕೆಲಸ ಮಾಡಿದ್ದೇನೆ ಎಂದರು.
ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ನೆರವಿನ ಮೂಲಕ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವುದು, ಪರಿಷತ್ತಿನ ನಿಂಬಂಧನೆ 5 ದಾಖಲಿಸದಂತೆ ಕನ್ನಡ ಶಾಲೆಗಳ ಸ್ಥಾಪನೆ ಪ್ರಯೋಗಿಕವಾಗಿ ಕೇಂದ್ರ ಸ್ಥಾನವಾಗಿರುವ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾದರಿಯಲ್ಲಿ ಕನ್ನಡ ಶಾಒಎ ಸ್ಥಾಪನೆ ಮಾಡುವುದು ನನ್ನ ಯೋಜನೆಯಾಗಿದೆ ಎಂದು ಹೇಳಿದರು.
ಪ್ರತಿ ವರ್ಷ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಸಮಾವೇಶ ಆಯೋಜನೆ, ರಾಜ್ಯದ ವಿವಿಧ ಕಡೆ ಉದಯೋನ್ಮುಖ ಹಾಗೂ ಯುವ ಬರಹಗಾರರ ಕಮ್ಮಟ ಶಿಬಿರಗಳ ಆಯೋಜನೆ ಮಾಡಿ ಸಾಹಿತ್ಯವನ್ನು ಬದುಕಿಗೆ ಪೂರಕವಾಗಿಸುವುದು, ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರುಗಳಾದ ವಿಶಿಷ್ಠವಾದ ಕೆಲವು ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು, ವಚನ, ದಾಸ, ನಾಟಕ, ಮಕ್ಕಳ, ಶಿಕ್ಷಕರ ಸಾಹಿತ್ಯ ಸಮಾವೇಶ ಹಾಗೂ ಕನ್ನಡ ಪರಂಪರೆಯ ಪೂರ್ವ ಸೂರಿಗಳ ಚಿಂತನೆ ಸಮಾವೇಶ ಆಯೋಜನೆ ಮಾಡುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಅಪರೂಪದ ಮೌಲಿಕ ಗ್ರಂಥಗಳ ಮರುಮುದ್ರಣ ಸೇರಿದಂತೆ ಒಟ್ಟು 12 ಕನ್ನಡ ಪರ ಯೋಜನೆಗಳನ್ನು ಹಮ್ಮಿಕೊಂಡಿದ್ದೇನೆ ಇದನ್ನು ಸಾಕಾರಗೊಳಿಸಲು ಎಲ್ಲರೂ ನನಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.
ಪತ್ರಕರ್ತ ಹಾಗೂ ಸಾಹಿತಿಗಳು ಆರ್.ಜಿ ಹಳ್ಳಿ ನಾಗರಾಜ, ಸಂಘಟಕ ಎನ್.ಶಿವುಕುಮಾರ ಉಪಸ್ಥಿತರಿದ್ದರು.