ಕನ್ನಡ ಸಾಹಿತ್ಯ ಪರಿಷತ್‌ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ  ಡಾ.ಎಂ.ಪಿ.ಶ್ರೀನಾಥ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ  ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.

ಶ್ರೀನಾಥ್ ಅವರು 1,488 ಮತಗಳನ್ನು ಪಡೆದರೆ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂಆರ್ ವಾಸುದೇವ ಅವರು 534 ಮತಗಳನ್ನು ಪಡೆದಿದ್ದಾರೆ.

ಶ್ರೀನಾಥ್ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿದ್ದು, ಅವರು 26 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಈ ನಡುವೆ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಮೂರನೇ ಬಾರಿಗೆ ಆಯ್ಕೆಯಾಗಿದ್ದು, ಅವರು ತಮ್ಮ ಪ್ರತಿಸ್ಪರ್ಧಿ ಸುಬ್ರಹ್ಮಣ್ಯ ಬಾಸ್ರಿ ಅವರು 400 ಮತ ಗಳಿಸಿದ್ದು, ಸುರೇಂದ್ರ ಅಡಿಗ 432 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

Related Posts

Leave a Reply

Your email address will not be published.