ಕರಾವಳಿಯಲ್ಲಿಅಗಸ್ಟ್ 12ರವರೆಗೆ ಭಾರೀ ಮಳೆ ಸಾಧ್ಯತೆ
ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.