ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್
ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸುತ್ತದೆ. ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚುಗಳಿಗೆ ಹಾನಿಯಾಗುವುದಿಲ್ಲ. ಈ ವಿಚಾರದಲ್ಲಿ ಸರಕಾರ ಮತ್ತು ಭಾರತೀಯ ಜನತಾ ಪಾರ್ಟಿ ಕಾನೂನಾತ್ಮಕವಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಧಾರ್ಮಿಕ ಕೇಂದ್ರಗಳಿಗೆ ಹಾನಿಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಈ ವಿಚಾರದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.