Header Ads
Breaking News

ಅಡ್ಯಾರ್‍ನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಮೃತ್ಯು, ಓರ್ವ ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಓಮ್ನಿ ಕಾರು, ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿಯಾದ ದುರ್ಘಟನೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್‍ನಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.ಮೃತರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್ (22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಮಹಮ್ಮದ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು.ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದೆ. ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related posts

Leave a Reply

Your email address will not be published. Required fields are marked *