Header Ads
Breaking News

ಅಥಣಿಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ : ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿಕೆ

ಅಥಣಿ ತಾಲೂಕಿನ ಸಾರ್ವಜನಿಕರಿಗೆ ಕೋವಿಡ್ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಗಂಭೀರವಾಗಿ ಪರಿಗಣಿಸಬೇಕು ಎಂದು ಕಾಂಗ್ರೆಸ್ ಮುಖಂಡರಾದ ಗಜಾನನ ಮಂಗಸೂಳಿ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರನ್ನು ಕೇಳಿದರೆ ಬೆಡ್‌ಗಳಿಲ್ಲ ಎಲ್ಲಾ ಭರ್ತಿಯಾಗಿವೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಕೋವಿಡ್ ಸೋಂಕಿತರಿಗೆ ಸರಿಯಾದ ಪ್ರಮಾಣದಲ್ಲಿ ಚುಚ್ಚುಮದ್ದು ಸಿಗುತ್ತಾ ಇಲ್ಲ. ಮೃತಪಟ್ಟ ರೋಗಿಗಳ ಹೆಸರಲ್ಲಿ ಚುಚ್ಚುಮದ್ದುಗಳನ್ನು ಖರೀದಿಸಿ ಅಂಥಹ ಚುಚ್ಚುಮದ್ದುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿವುದು ಬೆಳಕಿಗೆ ಬಂದಿವೆ. ಡಿಸಿಎಂ ಲಕ್ಷ÷್ಮಣ ಸವದಿ ಮತ್ತು ಶಾಸಕ ಮಹೇಶ್ ಕುಮಟಳ್ಳಿ ಅವರು ಅವರ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

 

Related posts

Leave a Reply

Your email address will not be published. Required fields are marked *