Header Ads
Breaking News

ಅಮರ ಸುಳ್ಯ ಸ್ವಾತಂತ್ರ್ಯ ಸಮರ 1837ರ ಸಂಸ್ಮರಣಾ ದಿನ

ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಹಾಗೂ ಮಹಿಳಾ ಘಟಕ ಮತ್ತು ಯುವ ಘಟಕದ ವತಿಯಿಂದ ಅಮರ ಸುಳ್ಯ ಸ್ವಾತಂತ್ರ್ಯ ಸಮರ 1837 ಸಂಸ್ಮರಣಾ ದಿನದ ಕಾರ್ಯಕ್ರಮ ಮಂಗಳೂರಿನ ಬಾವುಟಗುಡ್ಡೆಯ ಠಾಗೂರ್ ಪಾರ್ಕ್ ನಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ದೀಪಬೆಳಗಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಇತಿಹಾಸದಲ್ಲಿ ಅನೇಕ ಹೋರಾಟ ಕ್ರಾಂತಿಗಳ ಬಗ್ಗೆ ನಾವು ತಿಳಿದಿದ್ದೇವೆ ಆದ್ರೆ ನಮ್ಮದೇ ಸ್ಥಳೀಯ ಪ್ರದೇಶದಲ್ಲಿ ನಡೆದಂತಹ ಹೋರಾಟ ಕ್ರಾಂತಿಗಳ ಬಗ್ಗೆ ಈಗಿನ ಪೀಳಿಗೆ ತಿಳಿದಿಲ್ಲ.. ಇನ್ನೂ ಸುಳ್ಯದ ಬಂಗ್ಲೆಗುಡ್ಡೆಯಿಂದ ಮಂಗಳೂರಿನ ಬಾವುಟ ಗುಡ್ಡೆವರೆಗೆ ನಡೆದ ಹೋರಾಟ ಕಾಂತ್ರಿ ಬಗ್ಗೆ ಯುವ ಪೀಳಿಗೆಗೆ ತಿಳಿದಿರಲ್ಲ ಇದನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ನಾವು ಶ್ರಮಿಸಬೇಕಿದೆ ಮಾತ್ರವಲ್ಲದೆ ಸ್ವಾತಂತ್ರ್ಯ ಹೋರಾಟಗಾರ ನೆನಪಿಗಾಗಿ ಈ ಭಾಗದಲ್ಲಿ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸುತ್ತೇನೆ ಎಂದವರು ಹೇಳಿದರು.

ಬಳಿಕ ಖ್ಯಾತ ಲೇಖಕರಾದ ಅರವಿಂದ ಚೊಕ್ಕಾಡಿಯವರು ಮಾತನಾಡಿ ಅಮರ ಸುಳ್ಯ ಸ್ವಾತಂತ್ರ್ಯ ಸಮರದಹೋರಾಟಗಾರು ಬ್ರಿಟಿಷರನ್ನು ಯಾವ ರೀತಿ ಹೊಡೆದೋಡಿಸಿದರು, ಸಂಗ್ರಾಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭ ಒಕ್ಕಲಿಗ ಗೌಡರ ಸೇವಾ ಸಂಘ ವತಿಯಿಂದ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಸ್ಥಾಪನೆ ಮಾಡುವಂತೆ ಮತ್ತು ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ರಸ್ತೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಬೇಕು ಎಂದು ಮನವಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಮನಪ ಮೇಯರ್ ಪ್ರೇಮಾನಂದ್ ಶೆಟ್ಟಿ, ಮಾಜಿ ಸಚಿವ ರಮಾನಾಥ್ ರೈ, ಮಂಗಳೂರು ಮನಪ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್, ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ, ಲೇಖಕರು, ಸಂಶೋಧಕರಾದ ಪುತ್ತೂರು ಅನಂತರಾಜ ಗೌಡ, ಬೆಂಗಳೂರು ಕೊಡುಗು ಮತ್ತು ದ.ಕ ಗೌಡ ಸಮಾಜದ ಅಧ್ಯಕ್ಷ ತೇನನ ರಾಜೇಶ್, ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಗೌರಿ ಬನ್ನೂರು, ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಯುವ ಘಟಕದ ಅಧ್ಯಕ್ಷ ಕೆ.ಸಿ ಅಕ್ಷಯ್ ಗೌಡ ಕುರುಂಜಿ ಮತ್ತಿತರರು ಉಪಸ್ಥಿತರಿದ್ದರು….

Related posts

Leave a Reply

Your email address will not be published. Required fields are marked *