Header Ads
Breaking News

ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತದ ಅಪ್ಪಳಿಸುವ ಭೀತಿ : ಮೀನುಗಾರರಿಗೆ ಮುನ್ಸೂಚನೆ

ಮೇ 16ರಂದು ಅರಬ್ಬಿ ಸಮುದ್ರಕ್ಕೆ “ತೌಕ್ತೆ” ಚಂಡಮಾರುತ ಅಪ್ಪಳಿಸುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹಾಗಾಗಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಮಂಗಳೂರಿನ ಕೋಸ್ಟ್ ಗಾರ್ಡ್ ಸೂಚಿಸಿದೆ.

ಹಾಗೂ ಈಗಾಗಲೇ ಅಳ ಸಮುದ್ರ ಮೀನುಗಾರಿಕೆಗೆ ತೆರಳಿರುವ ಬೋಟುಗಳಿಗೆ ಗಸ್ತು ತಿರುಗುತ್ತಿದ್ದ ಐಸಿಜಿ ಹಡಗುಗಳು ಮತ್ತು ಸಿಜಿ ಡಾರ್ನಿಯರ್ ವಿಮಾನಗಳು ಚಂಡಮಾರುತದ ಎಚ್ಚರಿಕೆ ನೀಡಿ ಕೂಡಲೇ ದಡ ಸೇರುವಂತೆ ಸೂಚಿಸಿದೆ. ಮೇ.16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ತೀವ್ರವಾಗಿರಲಿದೆ.
ತೌಕ್ತೆ ಚಂಡಮಾರುತದಿಂದ ಕರ್ನಾಟಕದ ಕರಾವಳಿ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ 16ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Related posts

Leave a Reply

Your email address will not be published. Required fields are marked *