Header Ads
Breaking News

ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಿಗೆ ಸಚಿವ ಕೋಟ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿಯ ಮಲಬಾರ್, ಲಕ್ಷ್ಮಿ ಹಾಗೂ ಕಾರ್ನಾಡ್ ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಲ್ಲಿ ಆಕ್ಸಿಜನ್ ಉತ್ಪಾದನೆ ಹಾಗೂ ಸಿಲೆಂಡರ್ ಗಳಿಗೆ ರಿಫೀಲಿಂಗ್ ಮಾಡುವ ಪ್ರಕ್ರಿಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಕ್ಸಿಜನ್ ಫೀಲಿಂಗ್ ಘಟಕಗಳ ಗೆ ಯಾವ ಯಾವ ಜಿಲ್ಲೆಯ ಆಕ್ಸಿಜನ್ ಉತ್ಪಾದನಾ ಘಟಕಗಳಿಂದ ಎಷ್ಟು ಪ್ರಮಾಣದ ಆಕ್ಸಿಜನ್ ವಾರದಲ್ಲಿ ಎಷ್ಟು ಬರುತ್ತದೆ ಹಾಗೂ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸುವ ಬಗ್ಗೆ ಅವುಗಳನ್ನು ರೀಫಿಲ್ಲಿಂಗ್ ಮಾಡಿ ಯಾವ ಯಾವ ತಾಲೂಕಿನ ಆಸ್ಪತ್ರೆಗಳಿಗೆ ಕಳಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಮಾತನಾಡಿದರು. ಜಿಲ್ಲೆಯಲ್ಲಿನ 3 ಆಕ್ಸಿಜನ್ ಉತ್ಪಾದನಾ ಹಾಗೂ ರೀಫಿಲ್ಲಿಂಗ್ ಘಟಕಗಳಲ್ಲಿನ ಆಕ್ಸಿಜನ್ ಅನ್ನು ಆಸ್ಪತ್ರೆಗಳಲ್ಲಿನ ರೋಗಿಗಳ ಚಿಕಿತ್ಸೆಗೆ ಬೇಡಿಕೆಗನುಗುಣವಾಗಿ ಪೂರೈಕೆ ಆಗಬೇಕೆಂದು ಸೂಚಿಸಿದರು. ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಯಾವುದೇ ಆಸ್ಪತ್ರೆಯಲ್ಲಿ ಯಾಗದಂತೆ ಅವುಗಳ ಸಾಗಾಣಿಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಅಗತ್ಯಕ್ಕನುಸಾರವಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಡ್ಯೂರೂ ಸಿಲೆಂಡರ್ ಗಳಲ್ಲಿ ಹೆಚ್ಚಿನ ಆಕ್ಸಿಜನ್ ಶೇಖರಣೆ ಮಾಡಬಹುದಾಗಿದ್ದು ಅವುಗಳನ್ನು ತಾಲೂಕು ಆಸ್ಪತ್ರೆಗಳ ವೆಂಟಿಲೇಟರ್ ಗಳ ಬಳಕೆಗೆ ನೀಡ ಬಹುದಾಗಿದೆ ಅವುಗಳು ಎರಡು ದಿನ ಬಳಗಕ್ಕೆಗೆ ಬರುತ್ತವೆ ಅವುಗಳನ್ನು ವಿದೇಶದಿಂದ ತರಿಸಲು ಯೋಜನೆ ರೂಪಿಸಿದೆ . ಆಕ್ಸಿಜನ್ ಘಟಕಗಳ ಮೇಲುಸ್ತುವಾರಿಗೆ ಅಧಿಕಾರಿಗಳನ್ನು ದಿನದ 24 ಗಂಟೆಗೆ ಪಾಳಿಯ ಮೇಲೆ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸಚಿವರಿಗೆ ತಿಳಿಸಿದರು
ಈ ಸಂದರ್ಭದಲ್ಲಿ ಶಾಸಕ ಭರತ್ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿ ಡಾ. ಕುಮಾರ್ ಸಹಾಯಕ ಔಷಧಿ ನಿಯಂತ್ರಕರ ಗಳಾದ ರಮಾಕಾಂತ್ ಕುಂಟೆ ಶಂಕರ್ ನಾಯ್ಕ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *