Header Ads
Breaking News

ಆಡಳಿತ ಪಕ್ಷದಿಂದಲೇ ಅವ್ಯವಹಾರ ನಡೆದಿದೆ : ಕಾಂಗ್ರೆಸ್ ಮುಖಂಡ ಮಿಥುನ್ ರೈ

mithun rai

ರಾಜ್ಯದಲ್ಲಿ ಕೊರೊನಾದಿಂದ ಬಡವರಿಗೆ ಮೋಸ ಆಗುತ್ತಿದೆ. ಬಿಜೆಪಿ ಮುಖಂಡರು ಮುಸ್ಲಿಂಮರ ಮೇಲೆ ಆರೋಪ ಮಾಡುತ್ತಿದ್ದಾರೆ. ರಾಷ್ಟ್ರದ ಸಂಸದರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದರು.

ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೋವಿಡ್‍ನಿಂದಾಗಿ ರಾಜ್ಯ ಹೀನಾಯ ಸ್ಥಿತಿಯಲ್ಲಿದೆ. ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡುತ್ತಿಲ್ಲ. ಯುಪಿಎ ಸರ್ಕಾರ ಜನರ ಪರವಾಗಿ ಕೆಲಸ ಮಾಡಿದೆ. ಬೆಂಗಳೂರಲ್ಲಿ ಬೆಡ್ ಬ್ಲಾಕಿಂಗ್ ದಂಧೆ ವಿಚಾರದಲ್ಲಿ ಒಂದು ಸಮುದಾಯದವರ ಮೇಲೆ ಆರೋಪ ಮಾಡುತ್ತಿದ್ದಾರೆ.ಪ್ರಚಾರಕ್ಕಾಗಿ ಇಂತಹ ಕೆಲಸ ಮಾಡಲಾಗಿದೆ ಇದು ಖಂಡನೀಯ ಎಂದು ಹೇಳಿದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಎ.ಸಿ ವಿನಯ್ ರಾಜ್, ಪ್ರವೀಣ್ ಚಂದ್ರ ಆಳ್ವಾ, ವಿಶ್ವಾಸ್ ಕುಮಾರ್ ದಾಸ್, ಮಹಾಬಲ ಮಾರ್ಲ, ಪ್ರಕಾಶ್ ಸಾಲಿಯಾನ್, ಅನಿಲ್ ಕುಮಾರ್, ಸಂತೋಷ್ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಉಪಸ್ತಿತರಿದ್ದರು.

Related posts

Leave a Reply

Your email address will not be published. Required fields are marked *