Header Ads
Breaking News

ಆಮ್ಲಜನಕ ಪೂರೈಕೆಯಲ್ಲಿ ತಾರತಮ್ಯ : ಮಾಜಿ ಸಚಿವ ರಮನಾಥ ರೈ ಆರೋಪ

ದೇಶದಲ್ಲಿ ರಾಜ್ಯಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ತಾರತಮ್ಯ ಎಸಗಲಾಗುತ್ತಿರುವ ಆರೋಪವಿದೆ. ಪಿಎಂ ಕೇರ್‍ನಿಂದ ಎಲ್ಲ ರಾಜ್ಯಗಳಲ್ಲೂ ಆಮ್ಲಜನಕ ಘಟಕ ಸ್ಥಾಪಿಸುವ ಪ್ರಸ್ತಾವ ಇದೆಯಾದರೂ ಕರ್ನಾಟಕಕ್ಕೆ ಆ ಪ್ರಸ್ತಾವ ಇಲ್ಲಿಯವರೆಗೆ ಇಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಆಕ್ಷೇಪಿಸಿದರು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಿಎಂ ಕೇರ್‍ನಡಿ ಎಷ್ಟು ಹಣ ಸಂಗ್ರವಾಗಿದೆ, ಖರ್ಚಾಗಿದೆ ಎಂಬ ಬಗ್ಗೆ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಬೇಕು. ಮಾತ್ರವಲ್ಲದೆ. ಕಳೆದ ಬಾರಿ ಕೋವಿಡ್ ನಿರ್ವಹಣೆಗಾಗಿ ಕೇಂದ್ರ ಬಿಡುಗಡೆ ಮಾಡಿರುವ 20,000 ಕೋಟಿ ರೂ.ಗಳನ್ನು ಯಾವ ರೀತಿಯಲ್ಲಿ ಖರ್ಚು ಮಾಡಲಾಗಿದೆ ಎಂಬ ಬಗ್ಗೆಯೂ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಚಿವರು ಆಗ್ರಹಿಸಿದರು.

ರಾಜ್ಯದಲ್ಲಿ ಸಚಿವರ ನಡುವೆ ಸಮನ್ವಯತೆ ಇಲ್ಲ ಎಂದು ಆರೋಪಿಸಿದ ರಮಾನಾಥ ರೈ, ರಾಜ್ಯ ಸರಕಾರ ನಿಸ್ತೇಜವಾಗಿರುವುದರಿಂದಲೇ ರಾಜ್ಯಪಾಲರು ಸಭೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಗೆ ಆರೋಗ್ಯ ಸಮಸ್ಯೆ ಇದ್ದಾಗ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳಿದ್ದರೂ ರಾಜ್ಯಪಾಲರು ಸಭೆ ನಡೆಸಿರುವುದು ಸರಕಾರ ಕ್ರಿಯಾಶೀಲವಾಗಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಅವರು ಟೀಕಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಯಲ್ಲಿ ಸರಕಾರಕ್ಕೆ ಯಾವ ರೀತಿಯಲ್ಲಿ ಸಹಾಯ ನೀಡಬಹುದು ಎಂಬ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರ ಕಚೇರಿಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಪಕ್ಷದ ವತಿಯಿಂದ ಯಾವ ರೀತಿಯಲ್ಲಿ ಜನಸಾಮಾನ್ಯರಿಗೆ ಸಹಕಾರ ನೀಡಲು ಸಾಧ್ಯವೋ ಅದನ್ನು ಮಾಡಲಾಗುವುದು ಎಂದು ರಮಾನಾಥ ರೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮುಖಂಡರಾದ ಜೆ.ಆರ್.ಲೋಬೋ, ಶಶಿಧರ ಹೆಗ್ಡೆ, ಸದಾಶಿವ ಉಳ್ಳಾಲ್, ವಿನಯರಾಜ್, ಲುಕ್ಮಾನ್ ಬಂಟ್ವಾಳ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *