Header Ads
Breaking News

ಉಜಿರೆ ಕಾಲೇಜಿನ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಜಾಗೃತಿ ಅಭಿಯಾನ

ಗುರುವಾಯನಕೆರೆ: “ಕೋವಿಡ್ ಲಸಿಕೆಯನ್ನು ಈಗಾಗಲೇ ನೀಡಲಾಗುತ್ತಿದ್ದು, ನಿಮ್ಮ ಮೂಲಕ ಇನ್ನಷ್ಟು ಗ್ರಾಮಸ್ಥರು ಲಸಿಕೆ ತೆಗೆದುಕೊಳ್ಳಲು ಪ್ರೇರೇಪಿತರಾಗಲಿ. ಕೊವ್ಯಾಕ್ಸಿನ್ ಯಾವುದೇ ಭಯವಿಲ್ಲದೆ ತೆಗೆದುಕೊಳ್ಳಬಹುದು. ಇದಲ್ಲದೆ ಸರ್ಕಾರದ ಎಲ್ಲಾ ಸವಲತ್ತುಗಳು ಎಲ್ಲರಿಗೂ ಸಿಗುವಂತಾಗಲಿ” ಎಂದು ಕುವೆಟ್ಟು ಗ್ರಾ. ಪಂ ಅಧ್ಯಕ್ಷೆ ಆಶಾಲತಾ ಹೇಳಿದರು.

ಉಜಿರೆ ಶ್ರೀ ಧ.ಮಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚೆಗೆ ಕುವೆಟ್ಟು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದಅವರು “ಗ್ರಾಮ ಸ್ವರಾಜ್ ಕಾರ್ಯಕ್ರಮದಿಂದ ಗ್ರಾಮದ ಜನರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ವಿದ್ಯಾರ್ಥಿ ಜೀವನದ ಬೆಳವಣಿಗೆಗೆ ಅತ್ಯಂತ ಪೂರಕವಾದ ವಾತಾವರಣವನ್ನು ಕಲ್ಪಿಸಿಕೊಡುವ ಕಾರ್ಯಕ್ರಮವಾಗಿದೆ” ಎಂದರು.

ವಿದ್ಯಾರ್ಥಿಗಳ ಕಾರ್ಯಕ್ರಮದ ಉದ್ದೇಶದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲಿಪ್ ಎ.ಪಿ ‘ಪ್ರತಿವರ್ಷದಂತೆ ಈ ವರ್ಷವೂ ಕೂಡ ನಮ್ಮ ವಿಭಾಗದಿಂದ ಗ್ರಾಮ ಸ್ವರಾಜ್ ಮತ್ತು ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜನಸಾಮಾನ್ಯರಿಗೆ ಕೋವಿಡ್ ಲಸಿಕೆ ಮತ್ತು ಮುನ್ನೆಚ್ಚರಿಕೆ, ಕಸ ವಿಲೇವಾರಿ ಮತ್ತು ಜನರ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದು ಇದರ ಆಶಯವಾಗಿದೆ’ ಎಂದರು.

ಈ ಸಂದರ್ಭದಲ್ಲಿ ಗ್ರಾ. ಪಂ ಪಿಡಿಒ ಶ್ರೀನಿವಾಸ್, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಸದಸ್ಯ ಮಂಜುನಾಥ್ ಕುಂಬ್ಳೆ, ಕಾಲೇಜಿನ ಉಪನ್ಯಾಸಕ ನಟರಾಜ್ ಹೆಚ್.ಕೆ ಹಾಗೂ ಲಕ್ಷ್ಮಿಕಾಂತ ರೈ, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಮನೆ ಮನೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಗ್ರಾಮಸ್ಥರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

Related posts

Leave a Reply

Your email address will not be published. Required fields are marked *