Header Ads
Breaking News

ಉಡುಪಿಯಲ್ಲಿ ಆ.14ರಂದು ಮೆಘಾ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ.


ಅವರು ಉಡುಪಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ಆಗಸ್ಟ್ 14ರಂದು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಘಾ ಲೊಕ್ ಆದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ವ್ಯಾಜ್ಯದ ರಾಜಿ ಸಂದಾನ ಮಾಡಲು ಬಯಸುವವರು ತಮ್ಮ ಅಹವಾಲುಗಳನ್ನು ವಾಟ್ಸ್ ಆಫ್ ಅಥವಾ ಮೇಲ್ ಮೂಲಕ, ಆನ್‌ಲೈನ್ ಮೂಲಕವು ಸಲ್ಲಿಸಬಹುದಾಗಿದೆ.ಆಗಸ್ಟ್ 14ರಂದು ಬೆಳಗ್ಗೆಯಿಂದ ಸಂಜೆ ತನಕ ಅದಾಲತ್ ನಡೆಯಲಿದೆ.

 

Related posts

Leave a Reply

Your email address will not be published. Required fields are marked *