Header Ads
Breaking News

ಕಡಬ : ಹುತಾತ್ಮ ಭದ್ರತಾ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಭೆ

ಕಡಬ : ಛತ್ತೀಸ್‍ಗಡದ ಸುಕ್ಮಾ- ಬಿಜಾಪುರ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ಕಡಬ ಹಿಂದು ಜಾಗರಣ ವೇದಿಕೆಯಿಂದ ಕಡಬದ ಶ್ರೀ ದುರ್ಗಂಬಿಕಾ ಅಮ್ಮನವರ ದೇವಸ್ಥಾನದ ಸಭಾ ಭವನದಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಾಕ ಸಂಘದ ಕಾರ್ಯಕರ್ತ ಪ್ರವೀಣ್ ಆಳ್ವಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಂದು ನಿಮಿಷದ ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದೊಂದಿಗೆ ಹುತಾತ್ಮ ಯೋಧರಿಗೆ ಚಿರಶಾಂತಿ ಕೋರಲಾಯಿತು. ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ಪ್ರದಾನ ಕಾರ್ಯದರ್ಶಿ ರವೀಂದ್ರ ದಾಸ್ ಪೂಂಜ, ಧನ್ಯವಾದ ಗೈದರು. ಪುತ್ತೂರು ಜಿಲ್ಲಾ ಮಾತೃ ಸುರಕ್ಷಾ ಪ್ರಮುಕ್ ಮೋಹನ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು. ಕಡಬ ತಾಲೂಕು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮತ್ತು ದೇಶಭಕ್ತ ನಾಗರೀಕ ಬಂದುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಗೆ ಐಕ್ಯ ಮಂತ್ರ ಹಾಡಲಾಯಿತು.

Related posts

Leave a Reply

Your email address will not be published. Required fields are marked *