Header Ads
Breaking News

ಕರಾವಳಿಯಲ್ಲಿ ತೌಖ್ತೆ ಚಂಡಮಾರುತದ ಎಫೆಕ್ಟ್- ದ.ಕ ಜಿಲ್ಲೆಯಾದ್ಯಾಂತ ಭಾರೀ ಮಳೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತೌಕ್ತೇ ಚಂಡ ಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ವರುಣನ ಆರ್ಭಟ ಜೋರಾಗಿದ್ದು, ಶುಕ್ರವಾರ ರಾತ್ರಿಯಿಂದ ಗಾಳಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ . ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಪೋಷಣೆ ಮಾಡಿದೆ. ಮಳೆಯಿಂದಾಗಿ ಅಗತ್ಯ ವಸ್ತುಗಳ ಖರೀದಿಸಲಾಗದೆ ಜನರು ತತ್ತರಿಸಿದರು. ಜಿಲ್ಲೆಯ ನಗರ ಮತ್ತು ಗ್ರಾಮಾಂತರದಲ್ಲಿ ಭಾರೀ ಮಳೆಯಾಗಿದ್ದು, ಉಳ್ಳಾಲ ಸಹಿತ ಕಡಲ ತೀರದ ಅನೇಕ ಕಡೆ ಪ್ರಕ್ಷ್ಯುಬ್ಧ ವಾತಾವರಣ ಇದೆ. ಕಡಲ ಅಲೆಗಳ ಆರ್ಭಟ ಅತಿಯಾಗಿದೆ. ನಗರದಲ್ಲಿ ಅಸಮರ್ಪಕ ಒಳಚರಂಡಿ ವ್ಯವಸ್ಥೆಯಿಂದಾಗಿ ಮಳೆ ನೀರು ರಸ್ತೆಯಲ್ಲೇ ಹರಿದ ಪರಿಣಾಮ ಜನರು, ವಾಹನಿಗರು ಸಮಸ್ಯೆಗೀಡಾದರು. ಸಾರ್ವಜನಿಕರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಜನ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚರ ವಹಿಸುಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

Related posts

Leave a Reply

Your email address will not be published. Required fields are marked *