Header Ads
Breaking News

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌಹ್ವಾಣ್, ಮುರುಗೇಶ್ ನಿರಾಣಿ, ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಬಿ.ಸಿ.ಪಾಟೀಲ್, ಬಸವರಾಜ ಬೈರತಿ, ಡಾ.ಕೆ.ಸುಧಾಕರ್, ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಹುತೇಕರು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಪ್ರಭುಚೌವ್ಹಾಣ್ ಅವರು ದೇವರ ಮತ್ತು ಗೋಮಾತೆ ಹೆಸರಿನಲ್ಲಿ, ಮುರುಗೇಶ ನಿರಾಣಿ ಅವರು ದೇವರು ಮತ್ತು ರೈತರ ಹೆಸರಿನಲ್ಲಿ, ಶಿವರಾಂ ಹೆಬ್ಬಾರ್ ಅವರು ದೇವರ ಹಾಗೂ ಕ್ಷೇತ್ರದ ಜನರ ಹೆಸರಿನಲ್ಲಿ, ಬಿ.ಸಿ. ಪಾಟೀಲ್ ಅವರು ರೈತರು ಮತ್ತು ಬಸವಣ್ಣ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *