Header Ads
Breaking News

ಕಾಪು ಲೈಟ್ ಹೌಸ್ ಬಳಿ ತೀವ್ರಗೊಂಡ ಕಡಲ ಅಬ್ಬರ: ಶಾಸಕ ಲಾಲಾಜಿ ಮೆಂಡನ್ ಭೇಟಿ, ಪರಿಶೀಲನೆ

ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡ ಮಾರುತದ ಪರಿಣಾಮ ಕಡಲು ರೌದ್ರಾವತಾರ ತಾಳಿದೆ. ಕಾಪು ಲೈಟ್ ಹೌಸ್  ಸಮೀಪದಲ್ಲಿ ಕಡಲು ವಿಸ್ತಾರಗೊಂಡಿದ್ದು ಸಮುದ್ರ ತೀರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಸಮುದ್ರ ವಿಸ್ತಾರಗೊಂಡು ಸಮುದ್ರ ಕೊರೆತದ ಭೀತಿ ಎದುರಾಗಿದ್ದು, ಲೈಟ್ ಹೌಸ್ ನ ಸುತ್ತಲೂ ಸಮುದ್ರದ ನೀರು ಆವರಿಸಿಕೊಂಡಿದೆ. ಕಾಪು ಬೀಚ್ ಸುತ್ತಮುತ್ತಲಿನ ಲೈಟ್ ಹೌಸ್ ವಾರ್ಡ್, ಕೋಟೆ ಕೊಪ್ಪಲ, ಸುಬ್ಬಯ್ಯ ತೋಟ, ಬೈರುಗುತ್ತು ತೋಟ, ಗರಡಿ ವಾರ್ಡ್, ಲಕ್ಷ್ಮೀ ನಗರ ವ್ಯಾಪ್ತಿಯ 30 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. 

ಘಟನಾ ಪ್ರದೇಶಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್, ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ತಹಶೀಲ್ದಾರ್ ಪ್ರತಿಭಾ ಆರ್., ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಮೊದಲಾದವರು ಭೇಟಿ ನೀಡಿದರು.

Related posts

Leave a Reply

Your email address will not be published. Required fields are marked *