Header Ads
Breaking News

ಕಾರ್ಕಳದಲ್ಲಿರುವ ಒಳಚರಂಡಿ ಸಮಸ್ಯೆಗೆ ಶೀಘ್ರ ಮುಕ್ತಿ : ಪುರಸಭೆಯ ಮುಖ್ಯಾಧಿಕಾರಿ ರೂಪಾ ಶೆಟ್ಟಿ

 ಕಾರ್ಕಳ: ಕಾರ್ಕಳದಲ್ಲಿ ಹಲವಾರು ಸಮಸ್ಯೆಗಳಿದ್ದು ಅದರಲ್ಲಿ ಒಂದು ಚರಂಡಿಗಳಲ್ಲಿ ಹೂಳು ತುಂಬಿಕೊಂಡು ಸಾಧಾರಣ ಮಳೆ ಬಂದರೆ ಕಾರ್ಕಳ ಪೇಟೆಯಲ್ಲಿ ಕೃತಕ ನೆರೆ ಉಂಟಾಗುವುದು ನನ್ನ ಗಮನಕ್ಕೆ ಬಂದಿರುತ್ತದೆ ಅದನ್ನು ತಡೆಗಟ್ಟಲು ನಾನು ಈಗಾಗಲೇ ಚರಂಡಿಗಳ ಹೂಳನ್ನು ತೆಗೆಯಲು ಪ್ರಾರಂಭಿಸಿದ್ದೇನೆ ಎಂದು ಕಾರ್ಕಳದ ಪುರಸಭೆಯ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಹೇಳಿದರು.

ಅವರು ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಸಾರ್ವಜನಿಕರು ಅನಾವಶ್ಯಕವಾಗಿ ಪೇಟೆಯಲ್ಲಿ ತಿರುಗಾಡುವುದನ್ನು ನಿಲ್ಲಿಸಬೇಕು. ಮಾಸ್ಕ್ ಬಳಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಸರಕಾರದ ಸಲಹೆ ಸೂಚನೆಗಳನ್ನು ಪಾಲಿಸಿ ಕೊರೊನಾ ವನ್ನು ತಡೆಗಟ್ಟಲು ನಮ್ಮೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದರು.

Related posts

Leave a Reply

Your email address will not be published. Required fields are marked *