Header Ads
Breaking News

ಕಾರ್ಕಳದಲ್ಲಿ ರಿಕ್ಷಾ ಚಾಲಕ ಹಾಗೂ ಮಾಲಕರಿಗೆ ಜೀವರಕ್ಷಕ ಕಿಟ್ ವಿತರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾಚಾಲಕರಿಗೆ ಹಾಗೂ ಮಾಲಕರಿಗೆ ಕರೋನ ಸಂಕಷ್ಟ ಸಮಯ ದಲ್ಲಿ ಜೀವರಕ್ಷಕ ಕಿಟ್ ವಿತರಣೆಯನ್ನು ಉಡುಪಿ ಜಿಲ್ಲಾಧ್ಯಕ್ಷರ ಉಪಸ್ಥಿತಿಯಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಈ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರ ಮಾಡಬೇಕಿತ್ತು ಆದರೆ ಎರಡು ಸರ್ಕಾರಗಳಿಗೆ ಜನರ ಅಮೂಲ್ಯ ಮತಗಳು ಮಾತ್ರ ಬೇಕು, ಆದರೆ ಅವರ ಅಮೂಲ್ಯ ಜೀವದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸರಕಾರ ತನ್ನ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತದೆ ಎಂದು ಹೇಳಿದರು.karkala
ನಂತರ ಮಾತನಾಡಿದ ಜಿಲ್ಲಾಧ್ಯಕ್ಷರು ಅಶೋಕ್ ಕುಮಾರ್ ಕೊಡವೂರು ಸರಕಾರ ಯಾವುದೇ ಪರಿವಿಲ್ಲದೆ ಜನರ ಅಮೂಲ್ಯ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸಂತೋಷ್ ರಾವ್ ಸುಬೀತ್ ನ್. ರ್. ಕಾಂತಿ ಶೆಟ್ಟಿ, ರವಿಶಂಕರ್, ಶೋಭಾ, ಸಂತೋಷ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *