Header Ads
Breaking News

ಕುಂದಾಪುರ : ಕೊರೊನಾ ನಿಯಂತ್ರಣಕ್ಕಾಗಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಸಭೆ

ಕುಂದಾಪುರ: ಕರೋನಾ ನಿಯಂತ್ರಣಕ್ಕಾಗಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಕುರಿತು ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಯಿತು.

ನಗರದ ತಾ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರು, ಆಶಾ ಕಾರ್ಯಕರ್ತರು, ಪಿ.ಡಿ.ಓ ಸೇರಿದಂತೆ ಎಲ್ಲರೂ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಉತ್ತಮ ರೀತಿಯಲ್ಲಿ ಕರೋನಾ ತಡೆಗಟ್ಟುವ ಬಗ್ಗೆ ಚರ್ಚೆ ನಡೆಯಿತು. ಶಾಸಕರ ನಿಧಿಯಿಂದ 100 ಪಲ್ಸ್ ಮೀಟರ್, ಅಗತ್ಯವಿರುವಷ್ಟು ಥರ್ಮಲ್ ಸ್ಕಾನರ್, 100 ಬೆಡ್ ಗೆ ಹಣವನ್ನು ಬಿಡುಗಡೆ ಮಾಡುವುದಾಗಿ ಶಾಸಕರು ಹೇಳಿದರು.

ಕರೋನಾ ನಿಯಂತ್ರಣಕ್ಕೆ ವೈದ್ಯರು, ಆಶಾ ಕಾರ್ಯಕರ್ತರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸಾಮಾಗ್ರಿಗಳನ್ನು ನೀಡಲು ನಾನು ಬದ್ದನಿದ್ದೇನೆ ಎಂದು ವೈದ್ಯಕೀಯ ಸಿಬ್ಬಂದಿಗಳಿಗೆ ಧೈರ್ಯ ತುಂಬಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ 100 ಬೆಡ್ ಗಳನ್ನು ಸಿದ್ದಪಡಿಸಿ ಯಾವುದಾದರೂ ಶಾಲೆಯಲ್ಲಿ ವ್ಯವಸ್ಥೆ ಮಾಡಿ, ಅಗತ್ಯ ಇದ್ದಾಗ ಬಳಸಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಪಾಸಿಟಿವ್ ಬಂದ ಮನೆಗಳಿಗೆ ರಿಬ್ಬನ್ ಕಟ್ಟಲು ತಿಳಿಸಲಾಗಿದೆ. ಶಾಸಕರ ನಿಧಿಯಿಂದ ಸ್ಯಾನಿಟೈಸರ್, ಪಲ್ಸ್ ಆಕ್ಸಿಮೀಟರ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪ ಕಮೀಷನರ್ ಕೆ.ರಾಜು, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ತಾಲೂಕು ವೈದ್ಯಾಧಿಕಾರಿ ನಾಗಭೂಷಣ ಉಡುಪ, ಪಂ. ಪಿಡಿಓ ಗಳು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *