ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು.

ನವದುರ್ಗೆಯರ ದರ್ಶನ ಪಡೆದರು. ನಂತರ ಕೇಂದ್ರದ ಮಾಜಿ ಸಚಿವ ಜನಾರ್ದನ್ ಪೂಜಾರಿಯವರಿಂದ ಆರ್ಶೀವಾದವನ್ನು ಪಡೆದು. ಇದೇ ವೇಳೆ ಸಿಎಂ ಬೊಮ್ಮಾಯಿ ಅವರಿಗೆ ಜನಾರ್ಧನ ಪೂಜಾರಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.
ಇದೇ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕುದ್ರೋಳಿ ಕ್ಷೇತ್ರದಲ್ಲಿ ವೈಭವದಿಂದ ದಸರಾ ಉತ್ಸವ ನಡೆಯುತ್ತಿದೆ. ಇಡೀ ನಾಡಿಗೆ ಸುಭೀಕ್ಷೆ ಆಗಲಿ. ಇಡೀ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಸಿಗಲಿ. ಇಡೀ ನಾಡಿಗೆ ಸೇವೆ ಮಾಡುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ದೇವಾಲಯದ ಪದಾಧಿಕಾರಿಗಳು ಸೇರಿದಂತೆ ಸಂಬಂಧಿಸಿದವರು ಸ್ಥಳದಲ್ಲಿದ್ದರು.

Related Posts

Leave a Reply

Your email address will not be published.