Header Ads
Breaking News

ಕೊರೊನಾ ವಾರಿಯರ್ಸ್‍ಗಳಿಗೆ ಸ್ಯಾನಿಟೈಸರ್ ವಿತರಣೆ

ಸಚಿವ ಶ್ರೀಮಂತ್ ಪಾಟೀಲ ಅವರ ಅನುಪಸ್ಥಿತಿಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಹಾಗೂ ಕೊರೊನಾ ವಿರುದ್ಧ ಹೋರಾಡುತ್ತಿರುವ ಇಲಾಖೆ ಅಧಿಕಾರಿಗಳಿಗೆ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಪಾಟೀಲ ಅವರ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಸ್ಯಾನಿಟೈಸರ್ ವಿತರಿಸಲಾಗುತ್ತಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ರಾಜು ಮಾನೆ ಹೇಳಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಸಮುದಾಯ ಅರೋಗ್ಯ ಕೇಂದ್ರ, ತಹಸೀಲ್ದಾರ್ ಆಫೀಸ್, ತಾಲೂಕ ಪಂಚಾಯತ್ ಆಫೀಸ್, ಪೊಲೀಸ್ ಸ್ಟೇಷನ್, ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಆಫೀಸ್ ಹಾಗೂ ಕೋವಿಡ್ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ ಗಳಿಗೆ ಹಾಗೂ ಅಥಣಿ ಸಾರ್ವಜನಿಕ ಆಸ್ಪತ್ರೆ , ಪೊಲೀಸ್ ಇಲಾಖೆ, ಕಂದಾಯ ಇಲಾಖೆಗೆ ಸಹ ಸ್ಯಾನಿಟೈಸರ ವಿತರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ್ರು.ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಬಸಗೌಡ ಕಾಗೆ ಮಾತನಾಡಿ, ಸಚಿವ ಶ್ರೀಮಂತ ಪಾಟೀಲ ಅವರು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಉಚಿತವಾಗಿ ಸ್ಯಾನಿಟೈಜರ ನೀಡಿದ್ದಾರೆ. ಇದನ್ನು ನಾವು ಆಸ್ಪತ್ರೆಯ ವೈದ್ಯರಿಗೆ ಸಿಬ್ಬಂದಿವರ್ಗದವರಿಗೆ ಮತ್ತು ಗ್ರಾಮೀಣ ಪ್ರದೇಶದ ಸಿಬ್ಬಂದಿಯವರಿಗೆ ವಿತರಿಸುತ್ತೇವೆ ಎಂದರು.

ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ ಬಸಗೌಡರ ಮಾತನಾಡಿ, ಕೊರೊನಾ ವಿರುದ್ಧ ಹೋರಾಡುತ್ತಿರುವ ಕಾಗವಾಡ ಮತ್ತು ಅಥಣಿ ತಾಲೂಕಿನ ಎಲ್ಲಾ ಇಲಾಖೆಗಳಿಗೆ ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಸಚಿವ ಶ್ರೀಮಂತ ಪಾಟೀಲ ಅವರು ಸ್ವಂತ ಖರ್ಚಿನಲ್ಲಿ ಉಚಿತವಾಗಿ ಹ್ಯಾಂಡ್ ಸ್ಯಾನಿಟೈಜರ ನಮ್ಮ ಇಲಾಖೆ ಪರವಾಗಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಈ ಸಮಯದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *