Header Ads
Breaking News

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೋಸ್ಟರ್ ಪ್ರತಿಭಟನೆ

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೋಸ್ಟರ್ ಪ್ರತಿಭಟನೆ ನಡೆಯಿತು.  ಇದೇ ವೇಳೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್ ಸೌಲಭ್ಯವನ್ನು ಒದಗಿಸಬೇಕೆಂದು ಆಗ್ರಹಿಸಿದರು. ಬಡ ಕಾರ್ಮಿಕರಿಗೆ ಪರಿಹಾರ ಸಾಲ ಮನ್ನಾ ಮಾಡಿ ಬಡವರ್ಗದವರಿಗೆ ಆಹಾರದ ಕಿಟ್ ಒದಗಿಸಬೇಕು ಎಂದು ಘೋಷಣೆ ಕೂಗಿದರು. ಪ್ರಧಾನಿಯವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ಮೊಹ್ಮದ್ ಅಸ್ಲಂ, ಅಶ್ವಿನಿ, ಶೋಭಾ ಮುಂತಾದವರು ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *