Header Ads
Breaking News

ಕೋವಿಡ್ 2ನೇ ಅಲೆಯ ಪ್ರಾಣಹಾನಿಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ : ನಳಿನ್ ಕುಮಾರ್ ಕಟೀಲ್ ಆರೋಪ

ಪುತ್ತೂರು: ಕೊರೊನಾ ಎರಡನೇ ಅಲೆಯಲ್ಲಿ ಸಂಭವಿಸುತ್ತಿರುವ ಪ್ರಾಣಹಾನಿಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ತಾನೆಂದು ಹೇಳಿಕೊಳ್ಳುತ್ತಾ ದೇಶಭಕ್ತ ಪಕ್ಷ ಎಂದು ಹೇಳಿಕೊಂಡು ಬಂದಿದ್ದ ಕಾಂಗ್ರೆಸ್ ಇಂದು ದೇಶದ್ರೋಹದ ಕೆಲಸ ಮಾಡುತ್ತಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಪಾದಿಸಿದರು.

ಪುತ್ತೂರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಿಜ್ಞಾನಿಗಳಿಗೆ ಪ್ರೇರಣೆ ನೀಡಿ ಕೋವಿಡ್ ಲಸಿಕೆ ಆವಿಷ್ಕಾರ ಮಾಡಲಾಯಿತು. ಆದರೆ ಇದರ ವಿರುದ್ಧ ವ್ಯಾಪಕ ಅಪಪ್ರಚಾರ ಮಾಡಿದ ಕಾಂಗ್ರೆಸ್, ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಲೇವಡಿ ಮಾಡಿತು. ರಾಹುಲ್ ಗಾಂಧಿ, ಸಿದ್ಧರಾಮಯ್ಯ ಮುಂತಾದ ನಾಯಕರೆಲ್ಲ ಲಸಿಕೆಯನ್ನು ಟೀಕೆ ಮಾಡಿ ಜನರನ್ನು ನಿರುತ್ತೇಜನಗೊಳಿಸಿದರು. ಇದರಿಂದ ಆರಂಭದಲ್ಲಿ ಜನ ಲಸಿಕೆ ಪಡೆಯಲು ಮುಂದೆ ಬರಲೇ ಇಲ್ಲ. ಇವತ್ತು ಸಂಭವಿಸುತ್ತಿರುವ ಪ್ರಾಣ ಹಾನಿಗಳಿಗೆ ಇದೇ ಕಾರಣ. ಹೀಗಾಗಿ ಕೋವಿಡ್ ಮರಣ ಸರಣಿಗೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದವರು ಆಪಾದಿಸಿದರು. ಅಂದು ಲಸಿಕೆ ಪಡೆಯದಂತೆ ಜನರನ್ನು ದೂರ ಮಾಡಿದ ಕಾಂಗ್ರೆಸ್ ನಾಯಕರು ಇಂದು ಅವರೆಲ್ಲ ಲಸಿಕೆ ಪಡೆದುಕೊಂಡಿದ್ದಾರೆ ಮತ್ತು ಲಸಿಕೆ ಇಲ್ಲ ಎಂದು ಬೀದಿ ರಂಪ ಮಾಡುತ್ತಿದ್ದಾರೆ. ಈ ಮೂಲಕ ಪಕ್ಷ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿದೆ. ಎಂದು ಆಪಾದಿಸಿದರು.
.
ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *