Header Ads
Breaking News

ಕ್ರಿಕೆಟ್ ಆಡುವುದು ಕಂಡರೆ ಅರೆಸ್ಟ್ : ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ

Mangalore Police Commissioner Shashikumar

ಕ್ರಿಕೆಟ್ ಆಡುತ್ತಿದ್ದ ಯುವಕರು ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನೆ ಮಾಡಿದ್ದ ಪಿಡಿಓ ಅಧಿಕಾರಿ ಮೇಲೆ ಹಲ್ಲೆಗೈದಿದ್ದ ನಾಲ್ವರು ಯುವಕರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಫರಂಗಿಪೇಟೆಯ ಮಹಮ್ಮದ್ ಇದಾಯತುಲ್ಲಾ , ಪುದು ನಿವಾಸಿ ಅಹ್ಮದ್ ಬಸೀರ್ , ಕುತ್ತಾರ್ ನಿವಾಸಿ ಅಬುಬಕ್ಕರ್ ಸಿದ್ದಿಕ್, ಪರಂಗಿಪೇಟೆಯ ಅಹ್ಮದ್ ಸಿದ್ದಿಕ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗೋಷ್ಠಿ ಕರೆದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕೆಲವು ಒಳ ಪ್ರದೇಶಗಳಲ್ಲಿ ಯುವಕರು ಕ್ರಿಕೆಟ್, ವಾಲಿಬಾಲ್ ಆಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಇದಕ್ಕಾಗಿ ಆಯಾ ಠಾಣೆಯ ವ್ಯಾಪ್ತಿಯಲ್ಲಿಪೊಲೀಸರ ಗಸ್ತನ್ನು ಹೆಚ್ಚಿಸುವಂತೆ ಸೂಚಿಸಿದ್ದೇನೆ. ಯುವಕರು ಕ್ರಿಕೆಟ್ ಆಡುವುದು ಪತ್ತೆಯಾದರೆ ಬಂಧಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ನಗರ ಪ್ರದೇಶದಲ್ಲಿರುವ ಮೈದಾನಗಳಲ್ಲಿ ಕ್ರಿಕೆಟ್, ವಾಲಿಬಾಲ್ ಆಡುವುದರ ಬಗ್ಗೆ ನಿಗಾಮೈದಾನಗಳಲ್ಲಿ ಕ್ರಿಕೆಟ್, ವಾಲಿಬಾಲ್ ಆಡುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಈ ಬಗ್ಗೆ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಸಿಬ್ಬಂದಿಗೆ ನಿಗಾ ವಹಿಸಲು ಸೂಚಿಸಲಾಗುವುದು. ಕೋವಿಡ್ ನಿಯಮ ಉಲ್ಲಂಘಟಿಸಿ ಆಟವಾಡುವುದು ಕಂಡುಬಂದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪಿಡಿಓ ರಾಜೇಂದ್ರ ಶೆಟ್ಟಿ, ಮೇ.25ರಂದು ಮಲ್ಲೂರು ಗ್ರಾಪಂ ಹೊರಗಡೆ ರಸ್ತೆ ಬದಿಯಲ್ಲಿ ನಾಲ್ವರು ಯುವಕರು ಮಾಸ್ಕ್ ಧರಿಸದೆ ನಿಂತಿರುವುದನ್ನು ಗಮಿಸಿದೆ. ಈ ಬಗ್ಗೆ ಮಾಸ್ಕ್ ಧರಿಸುವಂತೆ ಅವರಿಗೆ ಸೂಚಿಸಿದ್ದಲ್ಲದೆ, ತನ್ನ ಮೊಬೈಲ್‍ನಿಂದ ಫೋಟೋ ವೀಡಿಯೋ ತೆಗೆಯಲು ಮುಂದಾದಾಗ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಪ ಪೊಲೀಸ್ ಆಯುಕ್ತರಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *