Header Ads
Breaking News

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 6 ಜನ ಬುಕ್ಕಿಗಳ ಬಂಧನ-ಮಂಗಳೂರು ಪೊಲೀಸರ ಕಾರ್ಯಾಚರಣೆ

ಮಂಗಳೂರು : ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 6 ಜನ ಬುಕ್ಕಿಗಳ ಪ್ರಕರಣ ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತಾನಡಿದ ಅವರು ಬೇರೆಯವರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಜಾತೆಗೆ ಬಾಜಿದಾರರಿಂದ ಆನ್‌ಲೈನ್ ಮೂಲಕ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿ ಮೋಸದಿಂದ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿದ್ದ 6 ಜನ ಬುಕ್ಕಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.

ಮಂಗಳೂರಿನ ವಿಕ್ರಂ ಕುಂಪಲ, ಕೃಷ್ಣಾಪುರದ ಧನಪಾಲ್ ಶೆಟ್ಟಿ, ಸುರತ್ಕಲ್‌ನ ಕಮಲೇಶ್, ಮುಂಬೈಯ ಹರೀಶ್ ಶೆಟ್ಟಿ, ಅಶೋಕನಗರದ ಪೀತೇಶ್, ಉರ್ವ ಮಾರಿಗುಡಿಯ ಅವಿನಾಶ್ ಎಂಬವರನ್ನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಲಾಗಿದೆ ಎಂದರು.


ಈ ಪ್ರಕರಣದಲ್ಲಿ ಸುಮಾರು 20ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು 20 ಲಕ್ಷ ಹಣ ಹಾಗೂ 3 ಲಕ್ಷ ನಗದು ಮತ್ತು ಆನ್‌ಲೈನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ 10 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ ಎಂದರು

 

Related posts

Leave a Reply

Your email address will not be published. Required fields are marked *