Header Ads
Breaking News

ಗಂಭೀರ ಸ್ಥಿತಿ ತಡೆಗಟ್ಟಲು ನೂರು ಕೋಟಿ ಜನರಿಗೆ ಲಸಿಕೆ ನೀಡಿ : ಶಾಸಕ ಎಂ.ಬಿ. ಪಾಟೀಲ್

Vijayapura MLA Patil

ಕೊರೊನಾ ಸೋಂಕಿನಿಂದ ದೇಶದಲ್ಲಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಂದಿವೆ. ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಗಂಭೀರ ಸ್ಥಿತಿ ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ ಮಾಡುವುದೊಂದೇ ಶಾಶ್ವತ ಪರಿಹಾರ ಎಂದು ಶಾಸಕ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಉಳಿದ ಎಲ್ಲ ವಿಷಯಗಳನ್ನು ಬದಿಗಿರಿಸಿ, ಅತೀ ಕಡಿಮೆ ಅವಧಿಯಲ್ಲಿ 100 ಕೋಟಿ ಜನರಿಗೆ ಲಸಿಕೆ ಹಾಕಿಸುವ ಅಭಿಯಾನ ಕೈಗೊಂಡು, ಅಗತ್ಯ ನೆರವು ಒದಗಿಸಿ ವಿಶೇಷ ಆದ್ಯತೆ ನೀಡಬೇಕಾದ ತುರ್ತು ಅಗತ್ಯವಿದೆ. ಆಗ ಮಾತ್ರ ಈ ಸಮಸ್ಯೆಗೆ ಸಂಪೂರ್ಣ ಮತ್ತು ಶಾಶ್ವತ ಪರಿಹಾರ ಸಾಧ್ಯ ಎಂದು ತಿಳಿಸಿದ್ದಾರೆ.

ಈಗಾಗಲೇ ಲಸಿಕೆ ಮುಗಿಸಿರುವ ಅಮೆರಿಕಾ, ಯೂರೋಪಿಯನ್ ರಾಷ್ಟ್ರಗಳು, ಇಸ್ರೇಲ್ ಮತ್ತಿತರ ದೇಶಗಳು ಕೋವಿಡ್ ಮುಕ್ತವಾಗಿ ಅಲ್ಲಿನ ಜನ-ಜೀವನ ಮುಂಚಿನಂತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆ ಮಾದರಿಯಲ್ಲಿ ಭಾರತದಲ್ಲಿಯೂ 130 ಕೋಟಿ ಜನರಲ್ಲಿ ಕನಿಷ್ಠ 100 ಕೋಟಿ ಜನರನ್ನು ಗುರಿಯಾಗಿಸಿ ಈ ಲಸಿಕೆ ಹಾಕಿಸಬೇಕು ಎಂದು ಹೇಳಿದ್ದಾರೆ.

Related posts

Leave a Reply

Your email address will not be published. Required fields are marked *