Header Ads
Breaking News

ಟಾಸ್ಕ್ ಪೋರ್ಸ್ ಸಮಿತಿಯಿಂದ ಕೋವಿಡ್ ನಿಯಂತ್ರಣ ಸಾಧ್ಯವಾಗಿದೆ : ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೊಡಾಜೆ

ಮಾಣಿ ಗ್ರಾಮದಲ್ಲಿ ಕೋವಿಡ್-19 ಎರಡನೇ ಅಲೆ ಎದುರಿಸುವಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಅತ್ಯುತ್ತಮವಾದ ಕಾರ್ಯವೈಖರಿಯಿಂದ ಸಾಧ್ಯವಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕೊರೋನ ಮತ್ತು ಲಾಕ್ ಡೌನ್ ಸಮಸ್ಯೆಯನ್ನು ತಿಳಿದುಕೊಂಡು ಅದರಲ್ಲಿ ತೊಡಗಿಕೊಂಡಿರುವ ಮಾಣಿ ಗ್ರಾಮ ಪಂಚಾಯತ್, ನ್ಯಾಯಬೆಲೆ ಅಂಗಡಿಯಿಂದ ಸಾಮಾಗ್ರಿಗಳನ್ನು ಸಾಗಿಸುವ ಗ್ರಾಮಸ್ಥರಿಗೆ ಉಚಿತ ವಾಹನದ ಸೌಲಭ್ಯ, ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಮೀಟರ್, ಅಂಗನವಾಡಿ ಮತ್ತು ಶಾಕಾರ್ಯಕರ್ತೆಯರಿಗೆ ಕೊಡೆ ಹಾಗೂ ಕೊರೋನ ಪಾಸಿಟಿವ್ ಬಂದ ಕೆಲವು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ನೀಡುವ ಕಾರ್ಯವನ್ನು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಕೊರೋನ ನಿಯಂತ್ರಣಕ್ಕೆ ಮತ್ತಷ್ಟು ಒಗ್ಗಟ್ಟಿನಿಂದ ಕೆಲಸ ಮಾಡುವಲ್ಲಿ ಎಲ್ಲರೂ ಶ್ರಮಿಸಬೇಕೆಂದು ಹೇಳಿದರು. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಶಶಿಕಲಾರವರು ಮಾತನಾಡಿ, ಆರೋಗ್ಯದಲ್ಲಿ ಸಮಸ್ಯೆ ಇರುವವರು ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ಮನವರಿಕೆ ಮಾಡಬೇಕು, ಆರಂಭದಲ್ಲಿಯೇ ಜಾಗೃತೆ ವಹಿಸಿದಾಗ ಸಮಸ್ಯೆಯಿಂದ ಹೊರಬರಲು ಸಾಧ್ಯವಿದೆ, ವ್ಯಾಧಿ ತೀವ್ರ ಪ್ರಮಾಣದಲ್ಲಿ ಪರಿಣಾಮ ಬೀರಿದರೆ ಪರಿಹಾರ ತುಂಬಾ ಕಷ್ಟ ಎಂದು ಹೇಳಿದರು.
ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಗ್ರಾಮ ಕರಣಿಕೆ ಸುರಕ್ಷಾ,ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಪಂಚಾಯತ್ ಸದಸ್ಯರು ಹಾಗೂ ಕಾರ್ಯಪಡೆಯ ಸದಸ್ಯರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *