Header Ads
Breaking News

ದ.ಕ.ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಪದಗ್ರಹಣ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ವತಿಯಿಂದ ನೂತನ ಜಿಲ್ಲಾಧ್ಯಕ್ಷರ ಹಾಗೂ 16 ಬ್ಲಾಕ್‌ಗಳ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ  ರೈಯವರು ನೂತನ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜರವರಿಗೆ ಪಕ್ಷದ ಬಾವುಟವನ್ನು ನೀಡುವ ಮೂಲಕ ಮತ್ತು 16ಬ್ಲಾಕ್ ಅಧ್ಯಕ್ಷರುಗಳಿಗೆ ಹಸಿರು ಶಾಲು ಹಾಕಿ ಪದಗ್ರಹಣ ಮಾಡಿದರು.

ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ ಮಾತನಾಡಿ, ಕಾಂಗ್ರೆಸ್ ಪಕ್ಷದ ಒಬ್ಬ ಸಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಇಂದು ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ ಪಕ್ಷದ ದೊಡ್ಡ ದೊಡ್ಡ ಶಕ್ತಿಗಳ ಆಶಿರ್ವಾದವನ್ನು ಬೇಡುತ್ತನೆ. ಪಕ್ಷದ ತತ್ವ ಸಿದ್ದಾಂತಗಳಿಗೆ ಚುತಿ ಬಾರದಂತೆ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.

ಆನಂತರ ಮಾಜಿ ಸಚಿವರಾದ ರಾಮನಾಥ ರೈ ಮಾತನಾಡಿ, ಕಾಂಗ್ರೆಸ್ ಪಕ್ಷ ಸದಾ ರೈತರ ಪರವಾಗಿರುವ ಪಕ್ಷ, ದೇಶದಲ್ಲಿ ಮತ್ತು ರಾಜ್ಯದಲ್ಲಿ ರೈತರಿಗೆ ಅನ್ಯಾಯವಾದಾಗ ಧ್ವನಿ ಎತ್ತಿದ ಪಕ್ಷ ಆದರೆ ಈಗ ಬಿಜೆಪಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಆದರೂ ಅವರಿಗೆ ಅಧಿಕಾರ ನೀಡುತ್ತಿರುವುದು ವಿಪರ್ಯಾಸ, ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯು ಸದಾ ರೈತರ ಪರವಾಗಿದೆ ಎಂದು ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಸೇರಿದಂತೆ ಅನೇಕ ಕಾಂಗ್ರೆಸ್ ಹಿರಿಯ ಮುಖಂಡರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *