Header Ads
Breaking News

ನಾಳೆಯಿಂದ ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಬಿಗಿ ಕ್ರಮ- ಸಚಿವ ಕೋಟ ಶ್ರೀನಿವಾಸ ಪೂಜಾರಿ

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ‌ ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ‌ ಮಾತನಾಡಿದ ಅವರು ನಾಳೆ‌ ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು,10 ಗಂಟೆಯೊಳಗೆ ಎಲ್ಲರೂ‌ ಮನೆ ಸೇರಬೇಕು.ಬಳಿಕ ಅನಗತ್ಯವಾಗಿ ತಿರುಗಾಡಿದವರ ವಾಹನ ಸೀಝ್ ಮಾಡಲು ಪೊಲೀಸರಿಗೆ ಆದೇಶ ನೀಡಲಾಗಿದೆ .ವೀಕೆಂಡ್ ನಂದು ಸಂಪೂರ್ಣ ಲಾಕ್ ಡೌನ್ ಇದ್ದು ಅಂದು ಅಗತ್ಯ ವಸ್ತುಗಳ ಖರೀದಿಗೂ ಅವಕಾಶವಿಲ್ಲ.ಅನಾವಶ್ಯಕ ವಾಗಿ ತಿರುಗಾಡುವವರ ವಿರುದ್ಧ ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಅಂತಾ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ..

Related posts

Leave a Reply

Your email address will not be published. Required fields are marked *