Header Ads
Breaking News

ನಿಗದಿಯಾಗಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಬೇಕೆಂದು ಜಿಲ್ಲೆಯ ದೇವಸ್ಥಾನ ಮತ್ತು ದೈವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಸಮಿತಿಯವರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ನಿಗದಿಯಾಗಿರುವ ಜಾತ್ರೋತ್ಸವ, ನೇಮೋತ್ಸವಗಳಿಗೆ ಅನುಮತಿ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿಯನ್ನು ಮಾಡಿದರು. ಈ ಸಂದರ್ಭ ಮಾತನಾಡಿದ ಮಾಣಿಲ ಮೋಹನದಾಸ್ ಸ್ವಾಮೀಜಿಯವರು, ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ, ನೇಮೋತ್ಸವಗಳಿಗೆ ಅನುಮತಿ ಕೊಡದಿರುವುದು ಸರಿಯಲ್ಲ. ಕೋವಿಡ್ ನಿಯಮ ಪಾಲಿಸಿಕೊಂಡು ಕಡಿಮೆ ಜನಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶ ನೀಡಬೇಕೆಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ಶರಣ್ ಪಂಪ್‍ವೆಲ್, ಉದ್ಯಮಿ ಅಶೋಕ್ ರೈ, ಮೋನಪ್ಪ ಭಂಡಾರಿ, ಹರಿಕೃಷ್ಣ ಬಂಟ್ವಾಳ, ಜಗದೀಶ್ ಶೆಣವ ಹಾಗೂ ದೇವಸ್ಥಾನದ ಮತ್ತು ದೈವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಸಮಿತಿಯವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *