Header Ads
Breaking News

ಪಂಪ್‍ವೆಲ್ ಮೇಲ್ಸೇತುವೆಯಲ್ಲಿ ಅಪಘಾತ: ಬೈಕ್ ಸವಾರನಿಗೆ ಗಾಯ

pumpwell accident

ಮಂಗಳೂರಿನ ಪಂಪ್ ವೆಲ್ ನಲ್ಲಿರುವ ಫ್ಲೈಓವರ್ ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.ಅವಘಡದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ದ್ವಿಚಕ್ರವಾಹನ ಸವಾರ ನಗರದ ಗೋರಿಗುಡ್ಡೆ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದಾಗ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಯಾಗಿದೆ ಎನ್ನಲಾಗಿದೆ.ಇದರಿಂದ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ತೀವ್ರ ವಾಗಿ ಗಾಯಗೊಂಡಿದ್ದಾರೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಇನ್ನು ಢಿಕ್ಕಿ ಹೊಡೆತ ರಸಭಕ್ಕೆ ಕಾರು ಅಪಘಾತ ನಡೆದ ಸ್ಥಳದಿಂದ ಸುಮಾರು 50 ಮೀ. ದೂರದವರಗೆ ಚಲಿಸಿ ಬಳಿಕ ಕಾರು ಉರುಳಿಬಿದ್ದಿದೆ.

Related posts

Leave a Reply

Your email address will not be published. Required fields are marked *