Header Ads
Breaking News

ಪಚ್ಚನಾಡಿ ಡಂಪಿಂಗ್ ಯಾರ್ಡ್‌ಗೆ ಭಾರೀ ಬೆಂಕಿ

ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ನಿನ್ನೆ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವ? ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ  ವಿಳಂಬವಾಗಿದ್ದರೆ ಸಮೀಪದ ಮನೆಗಳಿಗೂ ಅಪಾಯ ಎದುರಾಗುವ ಭೀತಿ ಎದುರಾಗಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

Leave a Reply

Your email address will not be published. Required fields are marked *