Header Ads
Breaking News

ಪತ್ರಕರ್ತರಿಗೆ ನೆರವಾಗಲು ಸಿಎಂಗೆ ಕೆಯುಡಬ್ಲ್ಯೂಜೆ ಮನವಿ

ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರನ್ನು ಪ್ಯಾಕೇಜ್ ನಲ್ಲಿ ಸೇರಿಸಿ ತಲಾ 10 ಸಾವಿರ ರೂ ನೆರವು ನೀಡಬೇಕು. ಕೋವಿಡ್ ಸೋಂಕಿನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ತಲಾ5 ಲಕ್ಷ ರೂ ನೆರವು ನೀಡಬೇಕು. ಪತ್ರಿಕಾ ವಿತರಕರು ಮತ್ತು ಕೇಬಲ್ ಟಿವಿ ಆಪರೇಟರ್ಸ್ ಗಳಿಗೆ ಕೋವಿಡ್ ಲಸಿಕೆ ನೀಡಬೇಕು. ಪತ್ರಕರ್ತರ ಕುಟುಂಬ ಸದಸ್ಯರಿಗೂ ಆದ್ಯತೆ ಮೇಲೆ ಲಸಿಕೆ ಕೊಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ನೀಡಿದ್ದಾರೆ.

Related posts

Leave a Reply

Your email address will not be published. Required fields are marked *