Header Ads
Breaking News

ಪುತ್ತೂರಿನಲ್ಲಿ ಕೋವಿಡ್ ಸೋಂಕು ತಡೆಗೆ ಸಮಾಲೋಚನಾ ಸಭೆ

ಪುತ್ತೂರು: ಕೋವಿಡ್ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರಿ ಮತ್ತು ಖಾಸಗಿ ವೈದ್ಯರ ಸಹಿತ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಶ್ರಮ ಅಗತ್ಯವಿದ್ದು, ಸೋಂಕಿತರಿಗೆ ಆಕ್ಸಿಜನ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಅವರು ಮಂಗಳವಾರ ಪುತ್ತೂರಿನ ತಾಪಂ ಸಭಾಂಗಣಲ್ಲಿ ನಡೆದ ಕೋವಿಡ್-19 ಸೋಂಕು ತಡೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಹಾಗೂ ವೈದ್ಯರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ ಸೋಂಕು ಇದೀಗ ಗ್ರಾಮಾಂತರ ಪ್ರದೇಶಗಳಲ್ಲಿಯೂ ಹೆಚ್ಚಾಗುತ್ತಿದ್ದು, ಈಗಾಗಲೇ ತಾಲೂಕಿನ ಈಶ್ವರಮಂಗಲ, ಕೊಳ್ತಿಗೆ, ಮೇನಾಲ ಮತ್ತು ಬೆಳಂದೂರು ಪ್ರದೇಶವನ್ನು ಕಂಟೈನ್‍ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ. ಹೊರೆ ಜಿಲ್ಲೆ, ರಾಜ್ಯ ಮತ್ತು ದೇಶಗಳಿಂದ ಆಗಮಿಸುವವರ ಬಗ್ಗೆ ಸಮರ್ಪಕ ಮಾಹಿತಿ ಪಡೆದು ಅವರನ್ನು ಹೋಂ ಕ್ವಾರಂಟೈನ್ ಮಾಡಿಸುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚಿಸಿದರು.

ಕೋವಿಡ್ ನಿಯಂತ್ರಣ ಬಗ್ಗೆ ಮಾಹಿತಿ ನೀಡಿದ ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಅವರು ಈಗಾಗಲೇ ಜಿಲ್ಲಾಧಿಕಾರಿಗಳು ಹೆಚ್ಚುವರಿ ನಿಯಂತ್ರಣದ ಆದೇಶ ಹೊರಡಿಸಿದ್ದು, ಅದರಂತೆ ಬೆಳಗ್ಗೆ 9 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚಬೇಕು. ರಸ್ತೆಯಲ್ಲಿ ಅನಗತ್ಯ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದೆ. ಅಂತರ್‍ಜಿಲ್ಲಾ ಸಂಚಾರವನ್ನು ತಡೆಯುವ ನಿಟ್ಟಿನಲ್ಲಿ ಗಡಿ ಪ್ರದೇಶದಲ್ಲಿ ಚಕ್‍ಪೋಸ್ಟ್ ನಿರ್ಮಿಸಲಾಗಿದ್ದು ಬಿಗಿ ಕಾವಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ನಿರತವಾಗಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ತಹಸೀಲ್ದಾರ್ ರಮೇಶ್ ಬಾಬು, ಡಿವೈಎಸ್‍ಪಿ ಗಾನ ಪಿ ಕುಮಾರ್, ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ,ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *