Header Ads
Breaking News

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೆಗೆ ಕ್ಷಣಗಣನೆ

ಪುತ್ತೂರು ಜಾತ್ರೆಗೆ ಕ್ಷಣಗಣನೆ ಆಗುತ್ತಿದ್ದಂತೆ ಜಾತ್ರೆ ಶುದ್ದತೆಯಿಂದ ನಡೆಯಬೇಕು ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜಾತ್ರೆ ಗದ್ದೆ ಸ್ವಚ್ಚತೆಯಿಂದ ಇರಬೇಕೆಂದು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಅವರ ನೇತೃದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದೇವಳದ 14 ಎಕ್ರೆ ಸ್ಥಳದಲ್ಲಿ ಸ್ವಚ್ಚತೆ ಕಾರ್ಯ ನಡೆಯಿತು. ನ್ಯಾಯಾಧೀಶರು, ವಕೀಲರುಗಳು, ಬಿಜೆಪಿ, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸುಮಾರು 50 ಕ್ಕೂ ಮಿಕ್ಕಿ ಸಂಘ ಸಂಸ್ಥೆಗಳು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು. ಬೆಳಿಗ್ಗೆ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆರಂಭದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಆಗಮಿಸಿದ ಸಂಘ ಸಂಸ್ಥೆಗಳ ತಂಡದ ನಾಯಕರಿಗೆ ಆಯಾ ತಂಡದ ಸದಸ್ಯರಿಗೆ ಕೈ ಕವಚ, ಸ್ಯಾನಿಟೈಸರ್ ವಿತರಣೆ ಮಾಡಲಾಯಿತು. ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ವೇಳೆ ದೇವಳದ ವಠಾರ, ಗದ್ದೆ ಸಂಪೂರ್ಣ ಸ್ವಚ್ಛಗೊಂಡಿತ್ತು. ದೇವಳದ ಸಮಿತಿ ಸದಸ್ಯ ರಾಮಚಂದ್ರ ಕಾಮತ್ ಮತ್ತು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಉದ್ಘೋಷಕರಾಗಿ ಸಹಕರಿಸಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಬಿ ಐತ್ತಪ್ಪ ನಾಯ್ಕ್, ಡಾ.ಸುಧಾ ಎಸ್ ರಾವ್, ರವೀಂದ್ರನಾಥ ರೈ ಬಳ್ಳಮಜಲು, ದೇವಳದ ಪ್ರಧಾನ ಅರ್ಚಕ ವಿ.ಎಸ್ ಭಟ್ ಸ್ವಚ್ಚತಾ ಕಾರ್ಯಕ್ಕೆ ಮಾರ್ಗದರ್ಶನ ನೀಡಿದರು. ವ್ಯವಸ್ಥಾಪನಾ ಸಮಿತಿ ಸದಸ್ಯೆ ವೀಣಾ ಬಿ .ಕೆ ಸಂಘ ಸಂಸ್ಥೆಗಳ ಪಟ್ಟಿ ಮಾಡಿ ಸ್ವಚ್ಚತಾ ಕಾರ್ಯಕ್ಕೆ ಸ್ಥಳ ಗುರುತಿಸಿದರು. ದೇವಳದ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ನ್ಯಾಯಾಧೀಶರಾದ ಮಂಜುನಾಥ್, ಪ್ರಕಾಶ್, ಕಿಶನ್ ಬಿ ಮಡಲಗಿ, ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕಾಮತ್, ಶ್ವೇತಾ ಕಿರಣ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *