Header Ads
Breaking News

ಪ್ರಾಕೃತಿಕ ವಿಕೋಪ ಎದುರಿಸಲು ಸಿದ್ಧರಾಗಿ : ಕಡಬ ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್

ಕಡಬದ ಅಂಬೇಡ್ಕರ ಭವನದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ಪೂರ್ವ ಸಿದ್ಧತೆಯನ್ನು ನಡೆಸಲು ಸಹಾಯಕ ಅಯುಕ್ತರಾದ ಯತೀಶ್ ಉಳ್ಳಾಲ್ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಸ್ತೆ ಬದಿಯ ಅಪಾಯಕಾರಿ ಮರ, ಗೆಲ್ಲು ತೆರವು, ಚರಂಡಿ ದುರಸ್ತಿ, ಶಿಥಿಲಗೊಂಡ ಕಟ್ಟಡ, ಮನೆಗಳ ಮಾಹಿತಿ ಸಹಿತ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಏನೆ ಸಮಸ್ಯೆ ಬಂದರೂ ತಹಶೀಲ್ದಾರ್ ಅವರ ಗಮನಕ್ಕೆ ತನ್ನಿ, ಯಾವುದೇ ರೀತಿಯ ಜೀವ ಹಾನಿ ಮತ್ತು ಸೊತ್ತು ನಾಶ ಆಗದಂತೆ ಎಚ್ಚರ ವಹಿಸಿ ಎಂದು ಹೇಳಿದರು.
ಮಳೆಗಾಲದಲ್ಲಿ ಹರಡುವ ಮಲೇರಿಯ, ಡೆಂಗ್ಯೂ ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಎಸಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬಿಳಿನೆಲೆ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿದ್ದು ಫಾಗಿಂಗ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅಲ್ಲದೆ ಎಲ್ಲಾ ಸರ್ಕಾರಿ ಕಟ್ಟಡ ಕ್ವಾಟ್ರಸ್ ಗಳ ಸುತ್ತ ಫಾಗಿಂಗ್ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಕಡಬ ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಡಬ ತಹಶೀಲ್ದಾರ್ ಅನಂತ ಶಂಕರ್, ಪ.ಪಂ ಮುಖ್ಯಾಧಿಕಾರಿ ಅರುಣ್ ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *