Header Ads
Breaking News

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಹಿನ್ನೆಲೆ : ಸಚಿವ ಅಂಗಾರ ಭೇಟಿ

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್.ಅಂಗಾರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವೈದ್ಯರ ಕೊರತೆಯನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಮತ್ತು ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅನಿತಲಕ್ಷ್ಮೀ, ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ , ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಆರೋಗ್ಯ ಕೇಂದ್ರದ ಸಮಸ್ಯೆಗಳ ಬಗ್ಗೆ ಸ್ಥಳೀಯರಾದ ಪನ್ನೆ ಗುತ್ತು ಸುರೇಶ್ ಶೆಟ್ಟಿ ಪದ್ಮನಾಭ ಶೆಟ್ಟಿ ಪೆರುವಾಜೆ ರಾಕೇಶ್ ರೈ ಕೆಡೆಂಜಿ ಶ್ರೀನಾಥ್ ರೈ ಬಳಿಲ ರೈ, ರಾಮಕೃಷ್ಣ ಭಟ್ ಕುರುಂಬುಡೇಲ್ ಚಂದ್ರಕೊಲ್ಚರ್ ಪ್ರೇಮಚಂದ್ರ ಪ್ರೇಮ್ ಸ್ಟುಡಿಯೋ ಮತ್ತಿತರರು ಸಚಿವರ ಗಮನಕ್ಕೆ ತಂದಿದ್ದರು.

Related posts

Leave a Reply

Your email address will not be published. Required fields are marked *