Header Ads
Breaking News

ಪ. ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ : ಮೌನ ಪ್ರತಿಭಟನೆ

Attack on BJP activists in Bengal

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಂದ ಬಳಿಕ ಟಿಎಂಸಿ ಕಾರ್ಯಕರ್ತರು ನಡೆಸುತ್ತಿರುವ ಭೀಕರ ಹಿಂಸಾಚಾರವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿ ಸೂಚನೆ ಮೇರೆಗೆ ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಮೌನ ಪ್ರತಿಭಟನೆ ನಡೆಯಿತು. ನಗರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಧರಣಿ ನಡೆಸಿದ್ರು.

ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ ಟಿಎಂಸಿ ನಡೆಸುತ್ತಿರುವ ಭೀಕರ ಹಿಂಸಾಚಾರವನ್ನು ಖಂಡಿಸಿದ್ರು. ಪ್ರತಿಭಟನೆಯಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಕಾರ್ಪೋರೇಟರ್ ಪೂರ್ಣಿಮಾ, ಬಿಜೆಪಿ ಕಾರ್ಯಕರ್ತರಾದ ಶಶಿಲತಾ, ಸಂಧ್ಯಾ, ಲೀಲಾವತಿ ಪ್ರಕಾಶ್, ಭಾಸ್ಕರ್ ಚಂದ್ರಶೆಟ್ಟಿ, ರಮೇಶ್ ಕಂಡೆಟ್ಟು, ಸುರೇಂದ್ರ ಜಪ್ಪಿನಮೊಗರು ಸೇರಿದಂತೆ ಮತ್ತಿತರರು ಭಾಗವಹಿಸಿದ್ರು.

Related posts

Leave a Reply

Your email address will not be published. Required fields are marked *