Header Ads
Breaking News

ಬಂಟ್ವಾಳ ಉಪವಿಭಾಗದ ಮೆಸ್ಕಾಂ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮದಿನಾಚರಣೆ

ಬಂಟ್ವಾಳ ಉಪವಿಭಾಗದ ಮೆಸ್ಕಾಂ ಅಧಿಕಾರಿಗಳು ಹಾಗೂ ನೌಕಕರರ ಆಶ್ರಯದಲ್ಲಿ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರ ಬಿ.ಸಿ.ರೋಡಿನ ಮೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ನಡೆಯಿತು.

ಸಂವಿಧಾನದ ಪ್ರಸ್ತಾವನೆಯನ್ನು ಓದಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಾಯಿತು. ಕಾರ್ಯಕ್ರಮವನ್ನು ಮೆಸ್ಕಾಂ ಬಂಟ್ವಾಳ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಎಂ. ಉದ್ಘಾಟಿಸಿದರು. ಬಳಿಕ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಅತಿಥಿ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣ ಕುಮಾರ್ ಪೂಂಜ ಮಾತನಾಡಿ ಇಡೀ ವಿಶ್ವದಲ್ಲಿ ರಕ್ತಕ್ಕೇ ಪರ್ಯಾಯವಾದ ವ್ಯವಸ್ಥೆ ಮತ್ತೊಂದಿಲ್ಲ. ರಕ್ತದಾನ ಮಾಡುವುದರಿಂದಷ್ಟೇ ರಕ್ತ ಪಡೆಯಬಹುದಾಗಿದೆ. ಒರ್ವ ವ್ಯಕ್ತಿ ರಕ್ತದಾನ ಮಾಡುವುದರಿಂದ ಹಲವು ಮಂದಿಯ ಪ್ರಾಣ ಉಳಿಸಲು ಸಾಧ್ಯವಿದೆ ಎಂದರು.

ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರನ್ನು ಸನ್ಮಾನಿಸಲಾಯಿತು. ಮೆಸ್ಕಾಂ ನಂಬರ್ 2ನೇ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಪೈ ಮಾತನಾಡಿ ರಕ್ತದಾನದಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವ ಮೂಲಕ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಆರೋಗ್ಯವಂತರೆಲ್ಲರೂ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವಂತೆ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಎಂ. ಮಾತನಾಡಿ ಮಹಾ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಮೆಸ್ಕಾಂ ಸಿಬ್ಬಂದಿಗಳೆಲ್ಲರೂ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶ್ಸಸ್ವಿಗೊಳಿಸುವಂತೆ ತಿಳಿಸಿದರು.

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್, ಬೆಳ್ತಂಗಡಿ ಉಪವಿಭಾಗದ ಎಇಇ ಶಿವಶಂಕರ್, ವಿಟ್ಲ ಉಪವಿಭಾಗದ ಎಇಇ ಪ್ರವೀಣ್ ಜೋಷಿ, ಮೆಸ್ಕಾಂ ಲೆಕ್ಕಾಧಿಕಾರಿ ಅನ್ನಪೂರ್ಣ, ಎಇಇ ಭವತಾರಿಣಿ ಲೆಕ್ಕಾಧಿಕಾರಿ ಚಂದ್ರಶೇಖರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನೌಕರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಶಂಕರ್ ಪ್ರಕಾಶ್ ಕೆ. , ಪ.ಜಾತಿ ಮತ್ತು ಪಂಗಡ ಕಲ್ಯಾಣ ಸಂಸ್ಥೆಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಕೆ. ಮತ್ತಿತರರು ಉಪಸ್ಥಿತರಿದ್ದರು. ಕೆಎಂಸಿ ಬ್ಲಡ್ ಬ್ಯಾಂಕಿನ ಭವಾನಿ ಶಂಕರ್, ಸೇವಾಂಜಲಿ ಪ್ರತಿಷ್ಠಾನದ ಪದ್ಮನಾಭ ಕಿದೆಬೆಟ್ಟು, ದೇವದಾಸ್ ಶೆಟ್ಟಿ ಕೊಡ್ಮಾಣ್, ಎಂ.ಕೆ. ಖಾದರ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.ಮೆಸ್ಕಾಂನ ಸಿದ್ದರಾಜು ಸ್ವಾಗತಿಸಿದರು. ಆನಂದ್ ಎಂ. ವಂದಿಸಿದರು. ಬಳಿಕ ಮೆಸ್ಕಾಂ ಸಿಬ್ಬಂದಿಗಳು ರಕ್ತದಾನ ಮಾಡಿದರು.

Related posts

Leave a Reply

Your email address will not be published. Required fields are marked *