Header Ads
Breaking News

ಬಸ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ನಡೆದ ಅಫಘಾತದಲ್ಲಿ ಬೈಕ್ ಸವಾರ ದಾರುಣ ಸಾವನ್ನಪ್ಪಿದ ಘಟನೆ ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.
ಪೈವಳಿಕೆ ಬೀಡುಬೈಲ್‌ನ ಶಶಿಧರ (26) ಮೃತಪಟ್ಟವರು. ಮಂಗಳೂರಿನಿoದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ತಲಪಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಬಸ್ಸು ಢಿಕ್ಕಿ ಹೊಡೆದಿದ್ದು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿಧರರನ್ನು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಅವರು ಮೃತಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *