Header Ads
Breaking News

ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಬಯಲಿಗೆಳೆದ ಪ್ರಕರಣ ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮೆಚ್ಚುಗೆ

Ganesh Karnik
Ganesh Karnik

ಬೆಂಗಳೂರಿನಲ್ಲಿ ಸಂಸದ ತೇಜಸ್ಚಿ ಸೂರ್ಯ ಅವರು ಬೆಡ್ ಬ್ಲಾಕಿಂಗ್ ಎಂಬ ಅಕ್ರಮ ದಂಧೆಯನ್ನು ಸತತ ಪ್ರಯತ್ನದ ಮೂಲಕ ಬಯಲಿಗೆಳೆದಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ರು.

Ganesh Karnikಅವರು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬೆಂಗಳೂರು ಮಹಾನಗರದಲ್ಲಿ ಬೆಡ್‍ಗಳ ಕೊರತೆ ಇದೆ ಅನ್ನೋ ಮಾತು ಕೇಳಿ ಬಂದಿತ್ತು. ಆದ್ರೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ಅದರ ಹಿಂದಿನ ಷಡ್ಯಂತರವನ್ನು ಬಯಲಿಗೆಳೆದಿದ್ದಾರೆ. ಹಾಗಾಗಿ ಬೆಂಗಳೂರು ಮಹಾಜನತೆಯ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕೊರೊನಾ ಮಹಾಮಾರಿ ಇಡೀ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದ್ರೆ, ಕೆಲವರು ಇದನ್ನೆ ಅಕ್ರಮ ದಂಧೆಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಈ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳು ಮರೆಮಾಚುತ್ತಿದೆ ಎಂದ್ರು. ಈ ಘಟನೆ ನಡೆದ ನಂತ್ರ ಈ ರಾಜ್ಯದ ವಿರೋಧ ಪಕ್ಷದ ನಾಯಕರು ಸರಣಿ ಟ್ವೀಟ್‍ಗಳನ್ನು ಮಾಡೋ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕೋದೆ ಇವರ ಕೆಲಸವಾ..? ಇದೇ ಅವರ ಸ್ವಭಾವವೇ..? ಎಂದು ವಿಪಕ್ಷ ನಾಯಕರ ವಿರುದ್ಧ ಕಿರಿಕಾರಿದ್ದಾರೆ.

Related posts

Leave a Reply

Your email address will not be published. Required fields are marked *