Header Ads
Breaking News

ಬೈಕ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು

ಪಡುಬಿದ್ರಿ ಠಾಣಾ ವ್ಯಾಪ್ತಿಯ ಎರ್ಮಾಳು ಬಡಾ ಜನಾರ್ಧನ ದೇವಸ್ಥಾನದ ಎದುರು ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಘಟಿಸಿದೆ.

ಅದಮಾರಿನ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಾಹಿಸುತ್ತಿದ್ದ, ಎಲ್ಲೂರು ದುರ್ಗನಿಲಯ ನಿವಾಸಿ ವಸಂತ ದೇವಾಡಿಗ (52),ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅವರು ಭಾನುವಾರ ರಾತ್ರಿ 9ರ ಸುಮಾರಿಗೆ ಎರ್ಮಾಳು ಜನಾರ್ಧನ ದೇವಸ್ಥಾನದ ಎದುರು ನಡೆದು ಕೊಂಡು ಹೋಗುತ್ತಿದ್ದಾಗ, ಹಿಂಬದಿಯಿಂದ ಶಂಕರ್ ಎಂಬಾತ ಚಲಾಯಿಸಿ ಕೊಂಡು ಬಂದ ಬೈಕ್  ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಲಾಯಿತು. ಆದರೂ ಅವರು ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.  ಮೃತರ ಮಗ ಕಾರ್ತಿಕ್ ದೇವಾಡಿಗರವರು ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *