Header Ads
Breaking News

ಮಂಗಳೂರಿನಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್ : ಪೊಲೀಸರಿಂದ ಕಠಿಣ ಕ್ರಮ

ಕೋವಿಡ್ ನಿಯಂತ್ರಣಕ್ಕಾಗಿ ಮಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಅನಗತ್ಯ ಸಂಚರಿಸುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿತ್ತು. 9 ಗಂಟೆಯ ಬಳಿಕ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದವು. ನಂತರ ಬಂದ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿ ಬಿಡುವ ದೃಶ್ಯ ಕಂಡುಬಂತು. ಇನ್ನು ಸುರತ್ಕಲ್‍ನ ಬೀಚ್ ಪ್ರದೇಶದಲ್ಲಿ ಜನರು ಕಂಡುಬಂದಿದ್ದು, ಪೊಲೀಸರು ಆಗಮಿಸುತ್ತಿದ್ದಂತೆ ಅಲ್ಲಿದ್ದವರು ಕಾಲ್ಕಿತ್ತಿದ್ದಾರೆ.

Related posts

Leave a Reply

Your email address will not be published. Required fields are marked *